ಕಳಪೆ ರಸ್ತೆ ಕಾಮಗಾರಿ ವಿರುದ್ಧ ಕ್ರಮ ಜರುಗಿಸಿ: ರಂಗಪ್ಪ
Dec 04 2024, 12:33 AM ISTಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಹೋಬಳಿಯ ಹುಣಸೆಹಳ್ಳಿ ಕೈಮರದಿಂದ ಹನಗವಾಡಿ ಗ್ರಾಮದ ಬಸ್ ನಿಲ್ದಾಣವರೆಗೆ ರಾಜ್ಯ ಹೆದ್ದಾರಿ 115, ಕೆ.ಕೆ. ರಸ್ತೆ ಕಾಮಗಾರಿ (ದಾವಣಗೆರೆ- ಶಿವಮೊಗ್ಗ ಜಿಲ್ಲೆ ಗಡಿಭಾಗದಲ್ಲಿ) ನಡೆಯುತ್ತಿದೆ. ಈ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೂಡಲೇ ನಿಲ್ಲಿಸಬೇಕು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಲ್. ರಂಗಪ್ಪ ನೇತೃತ್ವದಲ್ಲಿ ಗ್ರಾಮಸ್ಥರು ಮಂಗಳವಾರ ಆಗ್ರಹಿಸಿದರು.