ಮೌಲಾನಾ ಆಜಾದ್ ಶಾಲೆ ಕಾಮಗಾರಿ ಶೀಘ್ರ ಪುನಾರಂಭಿಸಿ
Nov 15 2024, 12:36 AM ISTದಾವಣಗೆರೆ ನಗರದ ಬೀಡಿ ಲೇಔಟ್ನಲ್ಲಿ ಸರ್ಕಾರಿ ಮೌಲಾನಾ ಆಜಾದ್ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ₹2 ಕೋಟಿ ವೆಚ್ಚದ ಕಾಮಗಾರಿ ಆರಂಭಿಸಲಾಗಿದೆ. ಈಗಾಗಲೇ ₹90 ಲಕ್ಷ ವೆಚ್ಚದ ಕಾಮಗಾರಿ ಕೈಗೊಳ್ಳಲಾಗಿದೆ. ಅಪೂರ್ಣ ಕಾಮಗಾರಿಯಿಂದಾಗಿ ಮಕ್ಕಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗುತ್ತಿದೆ. ಈ ಹಿನ್ನೆಲೆ ಶೀಘ್ರ ಬಾಕಿ ಕೆಲಸ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿ ಜಿಲ್ಲಾ ಘಟಕದಿಂದ ಸರ್ಕಾರಿ ಶಾಲೆ ಉಳಿಸಿ, ಸರ್ಕಾರಿ ಶಾಲೆ ಬೆಳೆಸಿ ಆಂದೋಲನಡಿ ಶಾಲಾವರಣದಲ್ಲಿ ಗುರುವಾರ ಅಹೋ ರಾತ್ರಿ ಧರಣಿ ಆರಂಭಿಸಲಾಗಿದೆ.