ಬಿಎಸ್ಪಿಎಲ್ ಕಾಮಗಾರಿ ಸ್ಥಗಿತಕ್ಕೆ ಸಿಎಂ ಸೂಚನೆ
Mar 05 2025, 12:35 AM ISTಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಅವರಿಗೆ ದೂರವಾಣಿ ಕರೆ ಮಾಡಿ, ತಕ್ಷಣ ಕಾರ್ಖಾನೆ ಆರಂಭಿಸಲು ನಡೆದಿರುವ ಸಿದ್ಧತೆ ನಿಲ್ಲಿಸುವಂತೆ ಹೇಳಿದ್ದಾರೆ. ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜಿನೀಶ್ ಅವರಿಗೂ ಸೂಚಿಸಿದ ಸಿದ್ದರಾಮಯ್ಯ, ಕಾರ್ಖಾನೆ ಸ್ಥಾಪನೆಗೆ ಜನರು ಹಾಗೂ ಗವಿಸಿದ್ಧೇಶ್ವರ ಶ್ರೀಗಳ ವಿರೋಧವಿದೆ. ಜತೆಗೆ ಜಿಲ್ಲೆಯ ಸರ್ವಪಕ್ಷ ನಿಯೋಗವು ಮನವಿ ಸಲ್ಲಿಸಿದೆ. ಹೀಗಾಗಿ ಜನರಿಗೆ ತೊಂದರೆಯಾಗುವ ಸ್ಥಳದಲ್ಲಿ ಕಾರ್ಖಾನೆ ಆರಂಭಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.