ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಎನ್.ಶ್ರೀನಿವಾಸ
Dec 15 2023, 01:30 AM ISTಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಗಳಕುಪ್ಪೆ ರಸ್ತೆಗೆ ಮುಕ್ತಿ ದೊರೆಯುತ್ತಿದ್ದು, ಗುಣಮಟ್ಟದ ಕಾಮಗಾರಿ ನಿರ್ಮಾಣಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು.ಪಟ್ಟಣದ ಅಗಳಕುಪ್ಪೆ ರಸ್ತೆಯಲ್ಲಿ ರಾಜ್ಯ ಹೆದ್ದಾರಿ ಪ್ರಾಧಿಕಾರದಿಂದ 6.5 ಕೋಟಿ ವೆಚ್ಚದಲ್ಲಿ 5 ಕಿ.ಮೀ. ಡಾಂಬರ್ ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ನಗರದ ಹೃದಯ ಭಾಗದಲ್ಲಿರುವ ಈ ರಸ್ತೆ ತುಂಬಾ ಹದಗೆಟ್ಟಿತ್ತು, ಮಳೆಗಾಲದಲ್ಲಿ ಭಾರಿ ಗುಂಡಿಗಳ ಸಮಸ್ಯೆಯನ್ನು ಚುನಾವಣೆ ಪೂರ್ವದಲ್ಲಿ ಗಮನಿಸಿದ್ದೆ. ಆದ್ದರಿಂದ ಈ ರಸ್ತೆಗೆ ಮೊದಲ ಆದ್ಯತೆ ನೀಡಿದ್ದೇನೆ. ಗಡಿ ಪ್ರದೇಶಕ್ಕೆ ಈ ರಸ್ತೆ ಸಂಪರ್ಕ ಕಲ್ಪಿಸುವುದರಿಂದ ಗುಣಮಟ್ಟ ಕಾಯ್ದುಕೊಂಡು ಕಾಮಗಾರಿ ನಡೆಸುವಂತೆ ಸೂಚಿಸಿದ್ದು, ಹೆಚ್ಚುವರಿ ಅನುದಾನ ನೀಡುವ ಮೂಲಕ ರಸ್ತೆಯ ವಿಭಜಕದಲ್ಲಿ ವಿದ್ಯುತ್ ದೀಪ ಅಳವಡಿಕೆಗೂ ಸೂಚನೆ ನೀಡಿದ್ದೇನೆ ಎಂದರು.