ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿ ಹಲವು ಕಾಮಗಾರಿ
Mar 08 2024, 01:49 AM ISTಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಆದಷ್ಟು ಶೀಘ್ರವೇ ಪೂರ್ಣಗೊಳಿಸಲಾಗುವುದು. ಈಗಾಗಲೇ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಪ್ರಧಾನಮಂತ್ರಿ ಆವಾಜ್ ಯೋಜನೆ ಅಡಿ 2048 ಗುಂಪು ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಬೀದಿಬದಿ ವ್ಯಾಪಾರಿಗಳಿಗೆ ಸುಸಜ್ಜಿತವಾದ ಫುಡ್ ಕೋರ್ಟ್ ನಗರದ ವಿವಿಧಡೆ ನಿರ್ಮಿಸಲಾಗುತ್ತಿದೆ ಎಂದು ಅಧ್ಯಕ್ಷೆ ಲತಾ ಚಂದ್ರಶೇಖರ್ ಹೇಳಿದ್ದಾರೆ.