ಮನೆ ಮುಂದೆ ನಿಲ್ಲಿಸಿದ್ದ ಕಾರು ಕದ್ದವರ ಬಂಧನ
Aug 14 2024, 12:55 AM IST ಮಂಡಲಮನೆ ಗ್ರಾಮದಲ್ಲಿ ಕಳ್ಳತನ ಮನೆಗೆ ನುಗ್ಗಿ ಕಳ್ಳತನ ಹಾಗೂ ಮನೆಯ ಮುಂದೆ ನಿಲ್ಲಿಸಿದ್ದ ಕಾರನ್ನು ಕಳ್ಳತನ ಮಾಡಿದ ಪ್ರಕರಣ ಜುಲೈ ೨೯ರಂದು ಪ್ರಕರಣ ದಾಖಲಾಗಿತ್ತು. ಈಗ ಕಳ್ಳತನದ ಆರೋಪಿಯನ್ನು ಬಂಧಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅರಸೀಕೆರೆ ಡಿವೈಎಸ್ಪಿ ಅವರ ಮಾರ್ಗದರ್ಶನದಲ್ಲಿ ಪ್ರಕರಣ ಭೇದಿಸಲು ವೃತ್ತನಿರೀಕ್ಷಕ ಸುಬ್ರಹ್ಮಣ್ಯ ಹಾಗೂ ಪಿಎಸ್ಐ ಪ್ರವೀಣ್ ಅವರ ನೇತೃತ್ವದಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಕೇವಲ ೧೫ ದಿನದಲ್ಲಿ ಬಂಧಿಸಿ ಆರೋಪಿಯಿಂದ ಚಿನ್ನಾಭರಣ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.