ನಿಗದಿತ ಸಮಯಕ್ಕೆ ತೀರ್ಥ ರೂಪ ತೋರಿದ ಕಾವೇರಿ ಮಾತೆ
Oct 18 2025, 02:02 AM ISTತಲಕಾವೇರಿಯ ಅರ್ಚಕ ಟಿ.ಎಸ್. ಗುರುರಾಜ್ ಆಚಾರ್ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಯಿಂದ ಪೂಜಾ ಕೈಂಕರ್ಯ ನೆರವೇರಿತು. 15ಕ್ಕೂ ಅಧಿಕ ಅರ್ಚಕರು ಕುಂಕುಮಾರ್ಚನೆ, ಪುಪ್ಪಾರ್ಚನೆ ಮೂಲಕ ಕಾವೇರಿಗೆ ಪೂಜೆ ಸಲ್ಲಿಕೆ ಮಾಡಿದರು. ತೀರ್ಥೋದ್ಭವ ಆಗುತ್ತಿದ್ದಂತೆ ಅರ್ಚಕ ವೃಂದದವರಿಂದ ಭಕ್ತರ ಮೇಲೆ ಕಾವೇರಿ ತೀರ್ಥ ಪ್ರೋಕ್ಷಣೆ ಮಾಡಲಾಯಿತು. ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಮೊದಲು ತೀರ್ಥವನ್ನು ಸಂಗ್ರಹಿಸಿ ಅಭಿಷೇಕ ಮಾಡಲಾಯಿತು.