ವಿವಿಧೆಡೆ ಭಾರೀ ಮಳೆಗೆ ಉಕ್ಕಿ ಹರಿದ ಕಾವೇರಿ, ಹೇಮಾವತಿ
Jul 27 2024, 12:50 AM ISTಕೃಷ್ಣರಾಜಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದ ಒಳಹರಿವು ಹೆಚ್ಚಿರುವುದರಿಂದ ೭೪ ಸಾವಿರ ಕ್ಯುಸೆಕ್ಗೂ ಹೆಚ್ಚು ನೀರನ್ನು ನದಿಗೆ ಹರಿಯಬಿಡಲಾಗುತ್ತಿದೆ. ಇದರ ಪರಿಣಾಮ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮ, ಪಶ್ಚಿಮವಾಹಿನಿ, ಸ್ನಾನಘಟ್ಟ, ಶ್ರೀಸಾಯಿ ಮಂದಿರ, ವೆಲ್ಲೆಸ್ಲಿ ಸೇತುವೆ ಸೇರಿದಂತೆ ಕಾವೇರಿ ನದಿ ತೀರದ ತಗ್ಗು ಪ್ರದೇಶಗಳು ಭಾಗಶಃ ಮುಳುಗಡೆಯಾಗಿವೆ. ಕೆಲವೆಡೆ ಜಮೀನುಗಳಿಗೆ ನೀರು ನುಗ್ಗಿರುವ ಬಗ್ಗೆಯೂ ವರದಿಯಾಗಿವೆ.