• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ:ಕರ್ನಾಟಕ ಸೇನಾಪಡೆಯಿಂದ ಮುಂದುವರೆದ ಪ್ರತಿಭಟನೆ

Oct 21 2023, 12:31 AM IST
ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಪ್ರತಿಭಟನಾನಿತರು ಮಾವಟಿ, ಗುದ್ದಲಿ, ಪಿಕಾಸಿ ಬಾಡ್ಲಿ ಹಿಡಿದು ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ, ಕೇಂದ್ರ, ರಾಜ್ಯ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು

ಕಾವೇರಿ ಸಮಸ್ಯೆಗೆ ಮೇಕೆದಾಟು ಅಣೆಕಟ್ಟೆಯೇ ಪರಿಹಾರ

Oct 21 2023, 12:30 AM IST
ರಾಮನಗರ: ಕಾವೇರಿ ನದಿ ನೀರಿನ ವಿಷಯದಲ್ಲಿ ಕಾನೂನು ಮತ್ತು ಎರಡು ರಾಜ್ಯಗಳ ನಡುವಿನ ನೀರಾವರಿ ತಜ್ಞರು ಗಂಭೀರ ಚಿಂತನೆ, ಕಾನೂನು ಹೋರಾಟ ಹಾಗೂ ವಸ್ತು ಸ್ಥಿತಿ ಮನವರಿಕೆ ಮಾಡಿಕೊಡುವ ಅವಶ್ಯಕತೆ ಇದೆ. ಮೇಕೆದಾಟು ನಿರ್ಮಾಣ ಮಾಡುವ ಮೂಲಕ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಅಧ್ಯಕ್ಷ ಧರಣೀಶ್ ರಾಂಪುರ ಹೇಳಿದರು.

ತಲಕಾವೇರಿ: 13ನೇ ವರ್ಷದ ಕಾವೇರಿ ನದಿ ಜಾಗೃತಿ ರಥಯಾತ್ರೆ

Oct 21 2023, 12:30 AM IST
ಅಖಿಲ ಭಾರತ ಸನ್ಯಾಸಿ ಸಂಘ ಕಾವೇರಿ ನದಿ ಸ್ವಚ್ಛತಾ ಆಂದೋಲನ, ಕಾವೇರಿ ರಿವರ್ ಸೇವಾ ಟ್ರಸ್ಟ್ ಆಶ್ರಯದಲ್ಲಿ ಸ್ವಚ್ಛ ಕಾವೇರಿಗಾಗಿ 13ನೇ ವರ್ಷದ ಕಾವೇರಿ ನದಿ ಜಾಗೃತಿ ರಥಯಾತ್ರೆಗೆ ತಲಕಾವೇರಿ ಕ್ಷೇತ್ರದಲ್ಲಿ ಚಾಲನೆ.

ಕಾವೇರಿ ಕೂಗು: ರೈತರಿಂದ ಎತ್ತಿನಗಾಡಿ, ಟ್ರ್ಯಾಕ್ಟರ್ ಮೆರವಣಿಗೆ

Oct 21 2023, 12:30 AM IST
ಜಲ ಸಂಕಷ್ಟ ವರ್ಷದಲ್ಲಿ ಕುಡಿಯುವ ನೀರನ್ನು ಕಾಯ್ದಿರಿಸದೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯಸರ್ಕಾರದ ವಿರುದ್ಧ ಮಂಡ್ಯ ತಾಲೂಕಿನ ವಿವಿಧ ಗ್ರಾಮಗಳ ರೈತರು ನಗರದಲ್ಲಿ ಎತ್ತಿನ ಗಾಡಿ, ಟ್ರಾಕ್ಟರ್‌ಗಳ ಮೆರವಣಿಗೆ ನಡೆಸಿದರು.

ನಿಗದಿಗಿಂತ ಒಂದು ನಿಮಿಷ ಮುಂಚೆ ಉಕ್ಕಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದ ತಾಯಿ ಕಾವೇರಿ

Oct 19 2023, 12:46 AM IST
ತಲಕಾವೇರಿ ಕ್ಷೇತ್ರದಲ್ಲಿ ಕೊಡಗು ಏಕೀಕರಣ ರಂಗದಿಂದ ಸಹಸ್ರಾರು ಭಕ್ತರಿಗೆ ಇನ್ನು ಒಂದು ತಿಂಗಳು ಅನ್ನಸಂತರ್ಪಣೆ ನಡೆಯಲಿದೆ.ಬುಧವಾರ ಜಿಲ್ಲೆಯ ವಿವಿಧೆಡೆಗಳಿಂದ ಮಾತ್ರವಲ್ಲದೇ ರಾಜ್ಯದ ಹಲವೆಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕಾವೇರಿ ಕ್ಷೇತ್ರಕ್ಕೆ ಬಂದು ಪುಣ್ಯ ತೀರ್ಥವನ್ನು ಸ್ವೀಕರಿಸಿದರು.

ಕಾವೇರಿ ಸಂಕಷ್ಟ ಸೂತ್ರಕ್ಕಾಗಿ ದಿಲ್ಲಿಯಲ್ಲಿ ಕರವೇ ಪ್ರತಿಭಟನೆ

Oct 19 2023, 12:45 AM IST
ವಿವಾದ ಇತ್ಯರ್ಥಕ್ಕೆ ಪ್ರಧಾನಿ ಮಧ್ಯಪ್ರವೇಶಕ್ಕೆ ಆಗ್ರಹ. ರಾಷ್ಟ್ರಪತಿ, ಪ್ರಧಾನಿ ಕಚೇರಿ, ಸಚಿವರಿಗೆ ಮನವಿ ಸಲ್ಲಿಕೆ.

ಕಾವೇರಿ ವಿವಾದ: ಕಡ್ಲೆಪುರಿ ಎರಚಿ ಕರ್ನಾಟಕ ಸೇನಾಪಡೆ ಪ್ರತಿಭಟನೆ

Oct 18 2023, 01:00 AM IST
ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಕಡ್ಲೆಪುರಿ ಎರಚಿ ಪ್ರತಿಭಟನೆ ನಡೆಸಲಾಯಿತು

ಕಾವೇರಿ ನದಿ ದಡದಲ್ಲಿ ಕಸ ಸುರಿದ ಗ್ರಾ.ಪಂ.: ಗ್ರಾಮಸ್ಥರ ಆಕ್ರೋಶ

Oct 17 2023, 12:45 AM IST
ಕಾವೇರಿ ನದಿ ದಡದಲ್ಲಿ ತ್ಯಾಜ ಸುರಿದ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾವೇರಿ ಹೋರಾಟಕ್ಕೆ ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಬೆಂಬಲ

Oct 17 2023, 12:45 AM IST
ಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಬೇಕು ಹಾಗೂ ಮೇಕೆದಾಟು ಯೋಜನೆಗೆ ಅಡಿಕಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ 100 ದಿನಗಳ ಪ್ರತಿಜ್ಞೆಯ ಹೋರಾಟದ 12ನೇ ದಿನದ ಪ್ರತಿಭಟನೆಗೆ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಬೆಂಬಲ ಸೂಚಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

ಕಕಜವೇ ಕಾವೇರಿ ಹೋರಾಟಕ್ಕೆ ರೈತ ಸಂಘ ಬೆಂಬಲ

Oct 16 2023, 01:46 AM IST
ಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವಂತೆ ಹಾಗೂ ಮೇಕೆದಾಟು ಯೋಜನೆಗೆ ಅಡಿಕಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ 100 ದಿನಗಳ ಪ್ರತಿಜ್ಞೆಯ ಹೋರಾಟಕ್ಕೆ ರಾಜ್ಯ ರೈತ ಸಂಘ ಬೆಂಬಲ ವ್ಯಕ್ತಪಡಿಸಿ 11ನೇ ದಿನದ ಪ್ರತಿಭಟನೆಯಲ್ಲಿ ಭಾಗಿಯಾಗಿತ್ತು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved