ಚಿತ್ರೀಕರಣದ ವೇಳೆ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕೇರಳದ ಸಿಪಿಎಂ ಪಕ್ಷದ ಶಾಸಕ ಹಾಗೂ ನಟ ಮುಕೇಶ್, ಜಯಸೂರ್ಯ, ಮಣಿಯನ್‌ಪಿಳ್ಳಾ ರಾಜು ಸೇರಿದಂತೆ ಹಲವರ ವಿರುದ್ಧ ಸ್ಥಳೀಯ ಪೊಲೀಸರು ಅತ್ಯಾಚಾರದ ಪ್ರಕರಣ ದಾಖಲಿಸಿದ್ದಾರೆ.
ಮಲಯಾಳಂ ಚಿತ್ರರಂಗದಲ್ಲಿ ಅವಕಾಶ ನೀಡಲು ನಟಿಯರನ್ನು ಲೈಂಗಿಕವಾಗಿ ಶೋಷಿಸಲಾಗುತ್ತಿದೆ ಎಂಬ ಪ್ರಕರಣ ಇದೀಗ ಮತ್ತಷ್ಟು ದೊಡ್ಡದಾಗಿದೆ.
ಓಲಾ ಕ್ಯಾಬ್ ಚಾಲಕ ನೀಡಿದ್ದ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಯುವತಿ ಆರು ವರ್ಷಗಳ ಹಿಂದೆ ದಾಖಲಿಸಿದ್ದ ದೂರು ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಮತ್ತು ಪ್ರಕರಣ ಕುರಿತು ಸಮಗ್ರ ಮಾಹಿತಿ ನೀಡದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.