ಮೈಕ್ರೋ ಫೈನಾನ್ಸ್ ಕಂಪನಿ, ಬಡ್ಡಿ ದಂಧೆಕೋರರ ಹಾವಳಿ ತಡೆಯಬೇಕಾಗಿದ್ದು, ಈಗಾಗಲೇ ಸುಗ್ರೀವಾಜ್ಞೆ ಮಸೂದೆ ಸಿದ್ಧಪಡಿಸಿ ಮುಖ್ಯಮಂತ್ರಿಗೆ ಕಳುಹಿಸಿಕೊಡಲಾಗಿದೆ. ಓಂಬುಡ್ಸ್‌ಮನ್ ನೇಮಕ ಮಾಡಲಾಗುತ್ತಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಹೇಳಿದರು.
‘ಕರ್ನಾಟಕ ಮೈಕ್ರೋ ಫೈನಾನ್ಸ್ (ಬಲವಂತ ಕ್ರಮಗಳ ನಿಯಂತ್ರಣ) ಸುಗ್ರೀವಾಜ್ಞೆ-2025’ ಕರಡು ಸಿದ್ಧಗೊಂಡಿದ್ದು, ಒಂದೆರಡು ದಿನಗಳಲ್ಲಿ ಜಾರಿಯಾಗುವ ನಿರೀಕ್ಷೆ ಇದೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಆಟಾಟೋಪಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ರೂಪಿಸುವ ಕುರಿತು ಸಭೆ ನಡೆಸಿದ್ದು, ಸಾಲಕ್ಕಾಗಿ ಅರ್ಜಿ ಸಲ್ಲಿಕೆಯಿಂದ ಹಿಡಿದು ಇಡೀ ಪ್ರಕ್ರಿಯೆಯನ್ನು ಆನ್‌ಲೈನ್ ಮೂಲಕವೇ ನಿಭಾಯಿಸಬೇಕು ಎಂಬುದು ಸೇರಿ ಹಲವು ನಿಯಮಗಳನ್ನು ಒಳಗೊಂಡ ಸುಗ್ರೀವಾಜ್ಞೆ ಅಂತಿಮ