ಸಾಲಗಾರರ ಶೋಷಣೆ ಮಾಡುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಕೊನೆಗೂ ಮುಂದಾಗಿದೆ.
ರಾಜ್ಯದ ವಿವಿಧ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಗ್ರಾಮೀಣ ಜನರಿಗೆ ಸಾಲ ನೀಡಿದ್ದ ಮೈಕ್ರೋ ಫೈನಾನ್ಸ್ ಕಿರುಕುಳ ಎಲ್ಲೆ ಮೀರಿದೆ
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಜನರ ಮೇಲಾಗುತ್ತಿರುವ ಕಿರುಕುಳ ತಪ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ.