ಅವ್ಯವಹಾರ ಶಂಕೆ: ವರ್ಷವಾದರೂ ಮುಗಿದಿಲ್ಲ ಬಿಟ್ಟಂಗಾಲ ಕುಡಿಯುವ ನೀರು ಯೋಜನೆ!
Jan 30 2025, 12:31 AM ISTಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಡಂಗಾಲ ಗ್ರಾಮದ ಪ.ಪಂಗಡ ಕಾಲೋನಿ ಮತ್ತು ನಾಂಗಾಲ ಶಾಲೆಯ ಬಳಿಯ ಪ.ಜಾತಿ ವರ್ಗದ ಜನರು ವಾಸ ಮಾಡುವ ಕಾಲೋನಿಯಲ್ಲಿ ಕುಡಿಯುವ ನೀರು ಯೋಜನೆಗೆ ಕ್ರಮವಾಗಿ ೩ ಲಕ್ಷ ಮತು ೨ ಲಕ್ಷ ರು. ಅನುದಾನ ಬಿಡುಗಡೆಗೊಳಿಸಿಲಾಗಿತ್ತು. ಯೋಜನೆಯ ಕಾಮಗಾರಿಗಳು ಆರಂಭವಾಗಿ ವರ್ಷ ಕಳೆದರೂ ಕಾಮಗಾರಿ ಮುಗಿದಿಲ್ಲ, ಆದರೆ ಯೋಜನೆಗೆ ಮೀಸಲಿಟ್ಟ ಹಣವನ್ನು ಬಿಲ್ ಈಗಾಗಲೇ ಮಾಡಿ ಆಗಿದೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ.