ಪ್ರಸಕ್ತ ವರ್ಷದಿಂದಲೇ ಕೃಷಿ ವಿವಿ ಆರಂಭ: ಚಲುವರಾಯಸ್ವಾಮಿ
Feb 26 2025, 01:04 AM ISTಕೃಷಿ ಹಾಗೂ ಕೃಷಿಕರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ. ಅದಕ್ಕೆ ಪೂರಕವಾಗಿ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ರಾಜ್ಯದಲ್ಲಿ ವಿದ್ಯಾರ್ಥಿಗಳು, ರೈತರು ಹಾಗೂ ಕೃಷಿ ವಿಶ್ವವಿದ್ಯಾನಿಲಯಗಳ ಹಿತದೃಷ್ಟಿಯಿಂದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಪುನರ್ ವಿಂಗಡಣೆ ಬಗ್ಗೆ ಚಿಂತನೆ ನಡೆಸಲಾಗಿದ್ದು, ಸಮಿತಿ ರಚಿಸಲಾಗಿದೆ. ವರದಿ ಆಧರಿಸಿ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದರು.