ಸಾವಯವ ಕೃಷಿ: ನಾಳೆ ಬೃಹತ್ ಜನಜಾಗೃತಿ ಸಮಾವೇಶ
May 22 2025, 01:29 AM ISTಪಟ್ಟಣದ ಶ್ರೀ ಪೇಟೆ ಬಸವೇಶ್ವರ ದೇವಾಲಯ ಆವರಣದಲ್ಲಿ ಲಿಂಗೈಕ್ಯ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ, ಹೊನ್ನಾಳಿ ಹಿರೇಕಲ್ಮಠದ ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ರಾಂಪುರ ಬೃಹನ್ಮಠದ ವಿಶ್ವೇಶ್ವರ ಶಿವಾಚಾರ್ಯ ಸ್ವಾಮೀಜಿ ಸ್ಮರಣಾರ್ಥ ಮೇ 23ರಂದು ರೈತರಿಗಾಗಿ ಸಾವಯವ ಕೃಷಿಯಿಂದಲೇ ಸದೃಢ ಭಾರತ ನಿರ್ಮಾಣ ಧ್ಯೇಯವಾಕ್ಯದೊಂದಿಗೆ ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಪೇ. ಬ.ದೇ. ಟ್ರಸ್ಟ್ ಅಧ್ಯಕ್ಷ ಯಲಬುರ್ಗಿ ಸಂತೋಷಕುಮಾರ್ ತಿಳಿಸಿದ್ದಾರೆ.