ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ದಾರುಣ ಸಾವು

Oct 07 2025, 01:02 AM IST
ಕೃಷಿ ಹೊಂಡದ ಬಳಿ ಆಟವಾಡುತ್ತಿದ್ದ ಇಬ್ಬರು ಪುಟ್ಟ ಬಾಲಕರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿರುವ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಶಾಲೆ ಹಾಗೂ ಅಂಗನವಾಡಿಗೆ ರಜೆ ಇದ್ದುದ್ದರಿಂದ ಪ್ರಣಯ್ ಹಾಗೂ ನಿಶಾಂತ್ ಮನೆಯ ಬಳಿ ಆಟವಾಡುತ್ತಿದ್ದರು. ಆಟವಾಡುತ್ತಲೇ ಕಾಫಿ ಎಸ್ಟೇಟ್‌ನಲ್ಲಿದ್ದ ಕೃಷಿ ಹೊಂಡದ ಬಳಿಗೆ ಕೈಯಲ್ಲಿದ್ದ ಪ್ಲಾಸ್ಟಿಕ್ ಆಟಿಕೆಗಳನ್ನು ಹಿಡಿದು ತೆರಳಿದ್ದಾರೆ. ಪ್ರಣಯ್ ತನ್ನ ಕೈಯಲ್ಲಿದ್ದ ಪ್ಲಾಸ್ಟಿಕ್ ರೈಲನ್ನು ಕೃಷಿ ಹೊಂಡಕ್ಕೆ ಎಸೆದಿದ್ದಾನೆ. ನಂತರ ಇಬ್ಬರು ಹೊಂಡದ ದಡದಲ್ಲಿ ಚಪ್ಪಲಿ ಬಿಟ್ಟು ರೈಲು ತರಲು ನೀರಿಗೆ ಇಳಿದಿದ್ದಾರೆ. ಕೃಷಿ ಹೊಂಡದಲ್ಲಿ ನೀರು ತುಂಬಿದ್ದರಿಂದ ಮೇಲೆ ಬರಲಾರದೆ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ.