ಸಂಸತ್ ಚುನಾವಣೆ ಸಮಯದಲ್ಲೇ ಶ್ರೀರಾಮುಲು ಕಾಂಗ್ರೆಸ್‌ಗೆ ಬರುತ್ತಾರೆಂದು ಚರ್ಚೆ ಆಗಿತ್ತು. ಆ ಸಮಯದಲ್ಲಿ ಅವರು ಬರಲಿಲ್ಲ. ಈಗ ಕಾಂಗ್ರೆಸ್‌ಗೆ ಬರುತ್ತಾರೋ, ಇಲ್ಲವೋ ಗೊತ್ತಿಲ್ಲ. ಒಮ್ಮೆ ಅವರು ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.