ವೈಜ್ಞಾನಿಕ ಕೃಷಿ ಪದ್ಧತಿಯಿಂದ ಸಬಲತೆ ಕಾಣಿ
Oct 17 2024, 01:43 AM ISTಕನ್ನಡಪ್ರಭ ವಾರ್ತೆ ವಿಜಯಪುರರೈತರು ಸಾಂಪ್ರದಾಯಕ ಕೃಷಿ ಪದ್ಧತಿ ಬದಲಾಗಿ, ವೈಜ್ಞಾನಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮದಲ್ಲಿ ಡಿ.ಸಿ.ಸಿ. ಬ್ಯಾಂಕ್‌ನ ನೂತನ ೫೦ನೇ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಡಿಸಿಸಿ ಬ್ಯಾಂಕ್ ಜಿಲ್ಲೆಯಲ್ಲಿನ ಫ್ಯಾಕ್ಸ್‌ಗಳ ಮೂಲಕ ಹಾಗೂ ಬ್ಯಾಂಕಿನ ಶಾಖೆಗಳಿಂದ ನೇರವಾಗಿ ಒಟ್ಟು ೨,೪೪,೨೩೬ ರೈತರಿಗೆ ₹೧೭೭೪.೨೫ ಕೋಟಿ ಅಲ್ಪಾವಧಿ ಬೆಳೆ ಸಾಲವನ್ನು ಸರ್ಕಾರದ ಬಡ್ಡಿ ಸಹಾಯಧನ ಯೋಜನೆಯಡಿ ಶೂನ್ಯ ಬಡ್ಡಿದರದಲ್ಲಿ ನೀಡಿದೆ.