ಕೃಷಿ ಚಟುವಟಿಕೆಯಲ್ಲಿ ತಾಂತ್ರಿಕತೆಗೆ ಒತ್ತು ನೀಡಿ
Dec 24 2024, 12:48 AM ISTಚಳ್ಳಕೆರೆ: ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರ ಕೃಷಿ ಇಲಾಖೆಗೆ ಹೆಚ್ಚು ಪ್ರೋತ್ಸಾಹ ನೀಡುತ್ತಾ ಬಂದಿದೆ. ರೈತರ ಹಲವಾರು ಸಮಸ್ಯೆಗಳನ್ನು ನಿಯಂತ್ರಿಸುವ ಮೂಲಕ ರೈತರು ನೆಮ್ಮದಿಯ ಬದುಕು ಕಂಡುಕೊಳ್ಳಲು ಸರ್ಕಾರ ಎಲ್ಲ ಸಹಕಾರ ನೀಡುತ್ತಿದೆ. ರೈತರು ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಬೇಕಾದಲ್ಲಿ ಕೃಷಿಯಲ್ಲಿ ತಾಂತ್ರಿಕ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಬೇಕೆಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು.