ತುರುವೇಕೆರೆ ತಾಲೂಕಿನಾದ್ಯಂತ ಕೃಷಿ ಚಟುವಟಿಕೆ ಬಿರುಸು
Aug 28 2024, 12:51 AM ISTತಾಲೂಕಿನ ಕಸಬಾ, ಮಾಯಸಂದ್ರ, ದಬ್ಬೇಘಟ್ಟ ಮತ್ತು ದಂಡಿನಶಿವರ ಹೋಬಳಿಯ ಅಲ್ಲಲ್ಲಿ ರಾಗಿ ಬೆಳೆಗೆ ಹಳದಿ ರೋಗ ಕಾಣಿಸಿಕೊಂಡಿದೆ. ಜೊತೆಗೆ ರಾಗಿ ಪೈರಿನ ತುದಿಯೂ ಸುರುಟಿದ ರೀತಿ ಒಣಗುತ್ತಿದೆ ಎಂದು ತಿಳಿದು ಬಂದಿದೆ. ಇದರಿಂದ ರೈತರಲ್ಲಿ ಆತಂಕ ಮನೆ ಮಾಡಿದೆ. ಇದರ ಜೊತೆಗೆ ಅವರೆ, ತೊಗರಿ ಮತ್ತು ಹರಳಿನ ಗಿಡದ ಎಲೆಗಳಲ್ಲೂ ಸಹ ಸಣ್ಣ ಸಣ್ಣ ರಂಧ್ರ ಕಾಣಿಸಿಕೊಂಡು ರೋಗಪೀಡಿತವಾಗಿವೆ. ಹಾಗಾಗಿ ಗಿಡದ ಬೆಳವಣಿಗೆ ಕುಂಠಿತವಾಗಲಿದೆ.