ರೈತರ ಕೃಷಿ ಸೋಲಾರ್‌ ವ್ಯವಸ್ಥೆಗೆ ಸರ್ಕಾರದಿಂದ ಶೇ.80 ಸಹಾಯಧನ: ಸಚಿವ ಕೆ.ಜೆ.ಜಾರ್ಜ್

Feb 04 2024, 01:31 AM IST
ರೈತರು ಕೃಷಿ ವಿದ್ಯುತ್‍ಗಾಗಿ ಸೋಲಾರ್ ವ್ಯವಸ್ಥೆ ನಿರ್ಮಿಸಿಕೊಳ್ಳುವವರಿಗೆ ಸರ್ಕಾರದಿಂದ ಶೇ.80ರಷ್ಟು ಸಹಾಯಧನ ನೀಡಲಾಗುವುದು. ಹೊಳಲೂರು ಮತ್ತು ಬೆಜ್ಜವಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ 220 ಕೆ.ವಿ. ವಿದ್ಯುತ್ ಉಪಕೇಂದ್ರ ಸ್ಥಾಪಿಸಲು ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡಲಾಗುವುದು. ಶರಾವತಿ, ವಾರಾಹಿ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಖುದ್ದು ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಲು ಉದ್ದೇಶಿಸಲಾಗಿದೆ. ಪರಿಸರಸ್ನೇಹಿ ಗ್ರೀನ್ ಹೈಡ್ರೋಜನ್ ಪವರ್ ಉತ್ಪಾದಿಸುತ್ತಿರುವ ಉತ್ತರ ಕರ್ನಾಟಕದ ಆಯ್ದ ಜಿಲ್ಲೆಗಳ ವಿದ್ಯುತ್‍ನ್ನು ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಸರಬರಾಜು ಮಾಡಲು ಕ್ರಮ ವಹಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.