ಹವಾಮಾನ ಬದಲಾವಣೆಯಲ್ಲಿ ಸಿಲುಕಿದ ಕೃಷಿ
Jan 22 2024, 02:16 AM ISTಚಾಮರಾಜನಗರ ಹವಾಮಾನ ಬದಲಾವಣೆ ಸುಳಿಯಲ್ಲಿ ಕೃಷಿ ಸಿಲುಕಿದೆ ಎಂದು ತುಮಕೂರು ಹಿರೇಹಳ್ಳಿ ಕೆವಿಕೆ ಮುಖ್ಯಸ್ಥ ಡಾ.ಎನ್. ಲೋಗಾನಂದನ್ ಆತಂಕ ವ್ಯಕ್ತಪಡಿಸಿದರು. ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಭಾನುವಾರ ಕೊಳ್ಳೇಗಾಲದ ಜೆಎಸ್ಬಿ ಪ್ರತಿಷ್ಠಾನ, ತುಮಕೂರಿನ ಗಾಂಧೀಜಿ ಸಹಜ ಬೇಸಾಯ ಶಾಲೆ, ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರೈತ ಸಂಘ ಹಾಗೂ ಹಸಿರು ಸೇನೆ ಸಾಮೂಹಿಕ ನಾಯಕತ್ವದ ವತಿಯಿಂದ ಕೃಷಿ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮತ್ತು ನಿರ್ವಹಣೆ ಕುರಿತು ಏರ್ಪಡಿಸಲಾಗಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.