ಮೋಸರಲ್ಲಿ ಕಲ್ಲು ಹುಡುಕುವುದು ಬಿಟ್ಟು ಕೆಲಸ ಮಾಡಿ :ಶಾಸಕ ಎನ್.ಶ್ರೀನಿವಾಸ್
Feb 20 2025, 12:46 AM ISTಕಳೆದ 30 ವರ್ಷಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಆಡಳಿತ ನಡೆಸಿದ್ದರೂ 50 ಕೋಟಿ ವೆಚ್ಚದ ಕಾಮಗಾರಿಗೆ ಮಂತ್ರಿಗಳು ಚಾಲನೆ ನೀಡಿದ ಉದಾಹರಣೆಗಳಿಲ್ಲ. ಆದರೆ ಇದೀಗ 300 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ್ದಕ್ಕೆ ಟೀಕೆ ಮಾಡುತ್ತಿದ್ದು, ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಬಿಟ್ಟು, ನಿಮ್ಮ ಕಾಲದಲ್ಲಿ ನಡೆದ ಅಭಿವೃದ್ಧಿ ಕೆಲಸಗಳ ಬಗ್ಗೆ ತಿಳಿಸಿ, ಜನರ ಮನಸ್ಸಿನಲ್ಲಿ ಉಳಿಯುವ ಕೆಲಸ ಮಾಡಿ ಎಂದು ಶಾಸಕ ಎನ್.ಶ್ರೀನಿವಾಸ್ ವಿರೋಧ ಪಕ್ಷದವರಿಗೆ ಟಾಂಗ್ ನೀಡಿದರು.