ಸರಿಯಾಗಿ ಕೆಲಸ ಮಾಡಿ, ಇಲ್ಲ ಮನೆಗೆ ಹೋಗಿ
Jun 26 2024, 12:32 AM ISTಕನ್ನಡಪ್ರಭ ವಾರ್ತೆ ಕಾಗವಾಡ: ಕಾಗವಾಡ ಮತಕ್ಷೇತ್ರದ ಹಳ್ಳಿ ಹಳ್ಳಿಗಳಲ್ಲಿ ಹೊಟೇಲ್, ಪಾನ್ ಶಾಪ್‌ಗಳಲ್ಲಿ ಮಹಾರಾಷ್ಟ್ರದ ಸಾರಾಯಿಯನ್ನು ರಾಜಾರೋಷವಾಗಿ ಮಾರಾಟ ಮಾಡಲಾಗುತ್ತಿದ್ದು, ಅದನ್ನು ತಡೆಯಲು ಅಬಕಾರಿ ಇಲಾಖೆಯ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ. ನೀವೇ ಅಕ್ರಮ ಮಾರಾಟಗಾರರಿಗೆ ಮಾಹಿತಿ ನೀಡಿ, ಅವರನ್ನು ಬಚಾವ್ ಮಾಡುತ್ತಿದ್ದೀರಿ, ಇನ್ನಾದರೂ ಎಚ್ಚೆತ್ತುಕೊಳ್ಳದಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಶಾಸಕ ರಾಜು ಕಾಗೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.