ಜಿಲ್ಲಾಡಳಿತದಿಂದ ಪ್ರತಿಭಟನೆಗಳನ್ನು ಹತ್ತಿಕ್ಕುವ ಕೆಲಸ
Sep 10 2024, 01:32 AM ISTರಾಮನಗರ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆಗಳಿಗೆ ನಿಷೇಧ ಹೇರುವ ಮೂಲಕ ರಾಮನಗರ ಜಿಲ್ಲಾಧಿಕಾರಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಈ ಕೂಡಲೇ ಜಿಲ್ಲಾಧಿಕಾರಿ ತಮ್ಮ ಈ ಆದೇಶವನ್ನು ಹಿಂದಕ್ಕೆ ಪಡೆದು, ಮೊದಲಿನಂತೆ ಪ್ರತಿಭಟನೆ ನಡೆಸಲು ಅವಕಾಶ ಕಲ್ಪಿಸಬೇಕು. ಇಲ್ಲದಿದಲ್ಲಿ ಈ ವಿಚಾರದ ಕುರಿತು ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದರು.