ಇಲಾಖೆಯ ಕೆಲಸ ಕಾಲಮಿತಿಯೊಳಗೆ ಮುಗಿಸಿ: ಮೊಹಮ್ಮದ ಮೊಹಸಿನ್
Jan 18 2024, 02:01 AM ISTಬಾಗಲಕೋಟೆ: ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನ ಸಂಪೂರ್ಣವಾಗಿ ಭರಿಸುವ ಮೂಲಕ ಇಲಾಖೆಗೆ ಸಂಬಂಧಿಸಿದ ಯಾವುದೇ ಕೆಲಸ ಬಾಕಿ ಉಳಿಸದೇ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ ಮೊಹಸಿನ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯತಿ ನೂತನ ಸಭಾಭವನದಲ್ಲಿ ಬುಧವಾರ ಜರುಗಿದ ಜಿಪಂ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಲಾಖೆಗೆ ಬರುವ ಪ್ರತಿಯೊಂದು ಅರ್ಜಿಗಳು ಸಕಾಲದಡಿ ಬರುವುದರಿಂದ ಪ್ರತಿಯೊಂದು ಕಡತಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿಯಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೆಳಹಂತದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಕೆಲಸ ಬಾಕಿ ಇದರಂತೆ ನೋಡಿಕೊಳ್ಳಲು ಸೂಚಿಸಿದರು.