ಬ್ರಾಹ್ಮಣ ಸಂಸ್ಕೃತಿಯನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ
Jul 21 2025, 01:30 AM ISTಇತ್ತೀಚಿನ ದಿನಗಳಲ್ಲಿ ಬ್ರಾಹ್ಮಣರ ಬಗ್ಗೆ ವಿರೋಧ ಹೇಳಿಕೆಗಳನ್ನು ನೀಡುವ ಮೂಲಕ ನಮ್ಮ ಸಂಸ್ಕೃತಿಯನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಮೈಸೂರು ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಬೇಸರ ವ್ಯಕ್ತಪಡಿಸಿದರು. ಸನಾತನ ಧರ್ಮ ಮತ್ತು ಬ್ರಾಹ್ಮಣರ ಕುರಿತು ಡಿಎಂಕೆ ನಾಯಕ ಸ್ಟಾಲಿನ್, ಅವರ ಮಗ ಉದಯ ನಿಧಿ ಬೇಕಾಬಿಟ್ಟಿ ಹೇಳಿಕೆ ನೀಡಿ ನಿಂದಿಸುತ್ತಿದ್ದಾರೆ. ಮೈಸೂರಿನಲ್ಲಿ ಭಗವಾನ್ ಎಂದು ಹೆಸರಿಟ್ಟುಕೊಂಡಿರುವ ಸಮಾಜ ಚಿಂತಕ, ಬ್ರಾಹ್ಮಣರು ಪೂಜೆ ಮಾಡುವ ದೇಗುಲಗಳಿಗೆ ಭೇಟಿ ನೀಡುವುದಿಲ್ಲ ಎಂದು ಅವಹೇಳನಕಾರಿ ಹೇಳಿಕೆ ನೀಡುತ್ತಾನೆ. ಇಂದಿಗೂ ಸಂಸ್ಕೃತ, ವೇದ ಪಾಠಶಾಲೆ ಹಾಗೂ ನಮ್ಮ ಆಚಾರ ವಿಚಾರಗಳಿಂದ ಹಿಂದೂ ಪುರಾತನ ಸಂಸ್ಕೃತಿ ಜೀವಂತವಾಗಿ ಉಳಿದಿದೆ ಎಂದರು.