ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ (ಐಜಿಪಿ) ಡಿ.ರೂಪಾ ಮೌದ್ಗಿಲ್ ಅವರಿಗೆ ರಾಜಿ ಸಂಧಾನ ಮಾಡಿಕೊಳ್ಳುವಂತೆ ಸೂಚಿಸಿರುವ ನಗರದ 5ನೇ ಎಸಿಎಂಎಂ ನ್ಯಾಯಾಲಯ, ‘ಒನ್ ಮಿನಿಟ್ ಅಪಾಲಜಿ’ ಎಂಬ ಇಂಗ್ಲಿಷ್ ಕೃತಿ ಓದುವಂತೆ ಇಬ್ಬರಿಗೂ ಸಲಹೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಸಾಲ ಕೊಡುವ ಮೊದಲು ಆಧಾರ್ ಕೆವೈಸಿ ಯಾಕೆ ಮಾಡಿಸುತ್ತಿಲ್ಲ? ಮರುಪಾವತಿಯ ಸಾಮರ್ಥ್ಯ ಗಮನಿಸದೆ ಒಬ್ಬನೇ ವ್ಯಕ್ತಿಗೆ ಪದೇ ಪದೇ ಸಾಲ ನೀಡುತ್ತಿರುವುದು ಯಾಕೆ ಎಂದು ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸೇರಿ 7 ಮಂದಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಅಲ್ಲದೆ, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ನಿರ್ದೇಶಿಸಿ 7 ಮಂದಿಗೆ ನೋಟಿಸ್ ಜಾರಿ ಮಾಡಿದೆ.
ಪತ್ನಿಯ ಕಿರಿಕುಳದಿಂದ ಬೇಸತ್ತು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಟೆಕಿ ಅತುಲ್ ಸುಭಾಷ್ ಅವರ 4 ವರ್ಷದ ಪುತ್ರನ ಕಸ್ಟಡಿಯನ್ನು ಅತುಲ್ ತಾಯಿಗೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅಜ್ಜಿಯು ಮಗುವಿನ ಪಾಲಿಗೆ ಅಪರಿಚಿತರಾಗಿದ್ದಾರೆ ಎಂದು ತಿಳಿಸಿದೆ.