ಪಿಎಫ್ಐ ಕಾರ್ಯಕರ್ತನ ಹಣ ಬಿಡುಗಡೆಗೆ ಕೋರ್ಟ್ ನಕಾರ
Nov 05 2024, 01:32 AM ISTಭಯೋತ್ಪಾದನೆ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ಕಾರ್ಯಕರ್ತ ಎನ್ನಲಾದ ವ್ಯಕ್ತಿಯ ಮನೆಯಿಂದ ನಗರದ ಕೆ.ಜಿ.ಹಳ್ಳಿ ಠಾಣಾ ಪೊಲೀಸರು ವಶಪಡಿಸಿಕೊಂಡಿರುವ ಒಟ್ಟು 1437600 ರು. ಬಿಡುಗಡೆ ಮಾಡಲು ಆದೇಶಿಸುವಂತೆ ಕೋರಿ ಆರೋಪಿಯ ತಂದೆ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಅರ್ಜಿದಾರರಿಗೆ 10 ಸಾವಿರ ರು. ದಂಡ ವಿಧಿಸಿದೆ.