ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗೆ ನಿಲ್ಲಿಸಿದ ಪ್ರಕರಣದಲ್ಲಿ, ತಮ್ಮ ತಂದೆಯ ಆತ್ಮಗೌರವ ಕಾಪಾಡುವಲ್ಲಿ ಅವರ ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ವಿಫಲರಾಗಿದ್ದಾರೆ ಎಂದು ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ವ್ಯಂಗ್ಯವಾಡಿದ್ದಾರೆ.
ಅನ್ವರ್ ಮಾಣಿಪ್ಪಾಡಿ ಅವರು, ‘ಕರ್ನಾಟಕ ವಕ್ಫ್ ಜಮೀನು ಹಗರಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ಕೆ.ರೆಹಮಾನ್ ಖಾನ್ ಭಾಗಿಯಾಗಿದ್ದಾರೆ’ ಎಂದು ಮಾಡಿದ ಆರೋಪ ಕೋಲಾಹಲಕ್ಕೆ ಕಾರಣವಾಗಿದೆ.
ಭೂ ವ್ಯವಹಾರಕ್ಕೆ ಸಂಬಂಧಿಸಿದ ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ನ ಸಂಪೂರ್ಣ ಉನ್ನತ ನಾಯಕತ್ವ (ಖರ್ಗೆ) ಭಾಗಿಯಾಗಿದೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ ಹಾಗೂ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬವು ಬೆಂಗಳೂರಿನಲ್ಲಿ ಹಂಚಿಕೆ ಮಾಡಲಾಗಿದ್ದ ಭೂಮಿಯನ್ನು ಸರ್ಕಾರಕ್ಕೆ ಮರಳಿಸುವ ನಿರ್ಣಯ ಕೈಗೊಂಡಿದ್ದನ್ನು ಬಿಜೆಪಿ ಮುಖಂಡ ರಾಜೀವ್ ಚಂದ್ರಶೇಖರ್ ಪ್ರಶ್ನಿಸಿದ್ದಾರೆ.
ನಿಯಮ ಬಾಹಿರವಾಗಿ ಸಿಎ ನಿವೇಶನ ಮಂಜೂರಾತಿ ಆರೋಪ ಎದುರಿಸುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ನಿರ್ವಹಣೆಯ ಸಿದ್ಧಾರ್ಥ ವಿಹಾರ ಟ್ರಸ್ಟ್ ಕೂಡ ಸಿಎ ನಿವೇಶನ ಮಂಜೂರಾತಿ ರದ್ದುಪಡಿಸುವಂತೆ ಕೆಐಎಡಿಬಿಗೆ ಪತ್ರ ಬರೆದಿದೆ