ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶ್ರೀರಾಮ ಮತ್ತು ಶಿವನ ಕುರಿತು ಇತ್ತೀಚೆಗೆ ಮಾಡಿದ ಹೇಳಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಗುರುವಾರ ವಾಗ್ದಾಳಿ ನಡೆಸಿದ್ದು, ಹಿಂದೂಗಳ ನಡುವೆ ಒಡಕು ಮೂಡಿಸಲು ಪ್ರಯತ್ನಿಸುತ್ತಿದೆ’ ಎಂದು ಆರೋಪಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು, ‘ಚುನಾವಣೆ ಮುಗಿದ ನಂತರ ಜನರು ಮೋದಿ ಅವರನ್ನು ‘ಸೋಲು ತಪ್ಪಿಸಿಕೊಳ್ಳಲು ಸುಳ್ಳಿನಿಂದ ತುಂಬಿದ, ಒಡೆದು ಆಳುವ ಮತ್ತು ಕೋಮುವಾದಿ ಭಾಷಣ ಮಾಡುತ್ತಿದ್ದ ಪ್ರಧಾನಿ ಎಂದು ಮಾತ್ರ ನೆನಪಿಸಿಕೊಳ್ಳುತ್ತಾರೆ’ ಎಂದು ವ್ಯಂಗ್ಯವಾಡಿದ್ದಾರೆ.
ತಮ್ಮ ಅಳಿಯ ರಾಧಾಕೃಷ್ಣ ದೊಡ್ಮನಿ ಕಣದಲ್ಲಿರುವ ಕಲಬುರಗಿ ಲೋಕಸಬೆ ಕ್ಷೇತ್ರದಲ್ಲಿ ಖರ್ಗೆ 4ನೇ ಸುತ್ತಿನ ಪ್ರಚಾರಕ್ಕೆ ಆಗಮಿಸಿ ವಾಡಿ ಹಾಗೂ ಕಮಲಾಪುರದಲ್ಲಿ ಬಿರುಸಿನ ಪ್ರಚಾರ ನಡೆಸಿ ಕಾಂಗ್ರೆಸ್ ಕೈ ಬಲಪಡಿಸುವಂತೆ ಜನರಲ್ಲಿ ಮನವಿ ಮಾಡಿದರು.