ರಾಜಕೀಯವೇ ಉಸಿರಾಗಿರುವ ಬೊಂಬೆನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಸ್ಟಾರ್ ವಾರ್ ಮಾತ್ರವಲ್ಲ ರಾಜಕೀಯವಾಗಿ ಬದ್ಧವೈರಿಯಾಗಿರುವ ಎರಡು ಕುಟುಂಬಗಳ ನಡುವಿನ ಕದನವಾಗಿಯೂ ಮಾರ್ಪಟ್ಟಿದೆ.
ಕಳೆದ ಎರಡು-ಮೂರು ದಿನಗಳಿಂದ ನಾಡಿನ ಮೂರು ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯನ್ನು ತುದಿಗಾಲ ಮೇಲೆ ನಿಲ್ಲಿಸಿದ್ದ ಸಿ.ಪಿ.ಯೋಗೇಶ್ವರ್ ಅಂತಿಮವಾಗಿ ಕಾಂಗ್ರೆಸ್ ಸೇರ್ಪಡೆಯಾಗುವ ಮೂಲಕ ಚನ್ನಪಟ್ಟಣ ಚುನಾವಣಾ ಕಣವನ್ನು ರಂಗೇರಿಸಿದ್ದಾರೆ.
ಉಪಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರ ಜೆಡಿಎಸ್-ಬಿಜೆಪಿ ಮೈತ್ರಿಕೂಟಕ್ಕೆ ಕಬ್ಬಿಣದ ಕಡಲೆಯಾಗಿದ್ದು, ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಬಂಡಾಯದ ಕಾರಣ ಕೇಸರಿ ಪಕ್ಷವು ತನ್ನ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ ಕ್ಷೀಣಿಸಿದೆ.