ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡಿ: ಸಂಸದೆ
Oct 17 2025, 01:00 AM ISTಜಿಲ್ಲಾಸ್ಪತ್ರೆಯಲ್ಲಿ ಪ್ರತಿ ತಿಂಗಳು ಸುಮಾರು 45 ಸಾವಿರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಮಧ್ಯ ಕರ್ನಾಟಕ ಹೃದಯ ಭಾಗದಲ್ಲಿರುವ ಈ ಜಿಲ್ಲೆಗೆ ನೆರೆ ಜಿಲ್ಲೆಗಳಿಂದ ವೈದ್ಯಕೀಯ ಚಿಕಿತ್ಸೆ ಪಡೆಯಲು ರೋಗಿಗಳು ಬರುತ್ತಾರೆ. ಅವರಿಗೆ ವೆಂಟಿಲೇಟರ್ಸ್ ಫಿಸಿಯೋಥೆರಫಿ, ಲ್ಯಾಕ್ಟೋಸ್ಕೋಪಿ ಸೇರಿದಂತೆ ಮುಂತಾದ ಉಪಕರಣಗಳ ಕೊರತೆ ಇತ್ತು. ಇದರಿಂದ ಖಾಸಗಿ ಆಸ್ಪತ್ರೆಗಳಿಗೆ ಅಥವಾ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೆ ಕಳುಹಿಸಬೇಕಾದ ಅನಿವಾರ್ಯತೆ ದಟ್ಟವಾಗಿತ್ತು. ಆದರೆ, ಇಂದು ಸಿಎಸ್ಆರ್ ನಿಧಿಯಡಿ ನೀಡಲಾದ ಉಪಕರಣ ಸರಿಯಾದ ರೀತಿಯಲ್ಲಿ ಬಳಸಿ ಸಾರ್ವಜನಿಕರಿಗೆ ಉಪಯುಕ್ತ ಆಗುವಂತೆ ಗುಣಮಟ್ಟದ ಚಿಕಿತ್ಸೆ ನೀಡಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.