ದುಬೈ ವಿಮಾನ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಗಳು 14.2 ಕೆ.ಜಿ. ಚಿನ್ನ ತಂದು ಕೊಟ್ಟು ಸಾಗಿಸುವ ಟಾಸ್ಕ್ ಕೊಟ್ಟಿದ್ದರು. ಆಗ ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಕೂತು ಯೂಟ್ಯೂಬ್ ನೋಡಿ ಚಿನ್ನವನ್ನು ದೇಹದಲ್ಲಿ ಅಡಗಿಸಿಕೊಂಡು ತಂದಿದ್ದೆ’ ಎಂದು ನಟಿ ರನ್ಯಾ ರಾವ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ರನ್ಯಾ ರಾವ್ ಚಿನ್ಮ ಸ್ಮಗ್ಲಿಂಗ್ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಕಳೆದ ಐದು ವರ್ಷಗಳಿಂದ ಕನ್ನಡ ಚಲನಚಿತ್ರ, ಕಿರುತೆರೆಯ ಕೆಲ ನಟಿಯರನ್ನು ಬಳಸಿಕೊಂಡು ವಿದೇಶದಿಂದ ಕಳ್ಳ ಹಾದಿಯಲ್ಲಿ ಚಿನ್ನ ಸಾಗಿಸುವ ಜಾಲವೊಂದು ಸಕ್ರಿಯವಾಗಿರುವ ವಿಚಾರ ಬೆಳಕಿಗೆ ಬಂದಿದೆ.
ನಟಿ ರನ್ಯಾ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ ಸಂಬಂಧ ಬೆಂಗಳೂರಿನ ಪ್ರಖ್ಯಾತ ಹೋಟೆಲ್ ಉದ್ಯಮಿಯೊಬ್ಬರ ಮೊಮ್ಮಗನನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ.
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರನ್ಯಾ ರಾವ್‌ಗೆ ಸಂಬಂಧಿಸಿದ ಸಂಸ್ಥೆಗೆ ಕೆಐಎಡಿಬಿಯಿಂದ ಯಾವುದೇ ಭೂಮಿ ಹಂಚಿಕೆ ಮಾಡಿಲ್ಲ ಎಂದು ಕೆಐಎಡಿಬಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಂ. ಮಹೇಶ್ ಸ್ಪಷ್ಟಪಡಿಸಿದ್ದಾರೆ.