ಕನ್ನಡ ಚಿತ್ರ ನಟಿ ರನ್ಯಾ ವಿರುದ್ಧದ ಚಿನ್ನ ಕಳ್ಳ ಸಾಗಣೆ ಪ್ರಕರಣ ಸಂಬಂಧ ದಿಢೀರ್ ಮಹತ್ವದ ಬೆಳವಣಿಗೆ ನಡೆದಿದೆ. ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ಬಳಿಕ ಕೇಂದ್ರ ತನಿಖಾ ದಳ (ಸಿಬಿಐ) ರಂಗ ಪ್ರವೇಶ ಮಾಡಿದ್ದು, ಈ ಸಂಬಂಧ ಪ್ರತ್ಯೇಕವಾಗಿ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿದೆ.
ನಟಿ ರನ್ಯಾ ರಾವ್ ಪ್ರಕರಣ ಇದೀಗ ಮಹತ್ವದ ತಿರುವು ನೀಡಿದೆ. ‘ನಾನು ಟ್ರ್ಯಾಪ್‌ಗೊಳಗಾಗಿದ್ದೆ’ ಎಂದು ನಟಿ ರನ್ಯಾ ಹೇಳಿಕೆ ನೀಡಿದ್ದು, ಹೀಗಾಗಿ ‘ಟ್ರ್ಯಾಪ್’ನ ಹಿಂದಿರುವ ಹ್ಯಾಂಡ್ಲರ್‌ಗಳಿಗಾಗಿ ಇದೀಗ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯದ (ಡಿಆರ್‌ಇ) ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ.
ಮನೆಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿ ಆತನಿಂದ 179 ಗ್ರಾಂ ಚಿನ್ನ, ಎರಡೂವರೆ ಕೆಜಿ ಬೆಳ್ಳಿ ಪದಾರ್ಥಗಳು ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಸೇರಿ 17.92 ಲಕ್ಷ ರು. ಮೌಲ್ಯದ ವಸ್ತುಗಳನ್ನು ಹಲಗೂರು ವ್ಯಾಪ್ತಿಯ ಪೊಲೀಸರು ವಶ ಪಡಿಸಿಕೊಂಡಿದ್ದಾರೆ