2023ರಲ್ಲಿ ಆಳಂದ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಾಡಿರುವ ಆರೋಪವನ್ನು ಕೇಂದ್ರ ಚುನಾವಣಾ ಆಯೋಗ, ಆಧಾರ ರಹಿತ ಎಂದು ಕರೆದಿದೆ.
ಭಾರೀ ಜನಪ್ರಿಯತೆ ಗಳಿಸಿರುವ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅಧಿಕೃತವಾಗಿ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ತಾವು ಸ್ಪರ್ಧಿಸಲು ಉದ್ದೇಶಿಸಿರುವ 2026ರ ಮೊದಲ ವಿಧಾನಸಭೆ ಚುನಾವಣೆಯಲ್ಲೇ, ರಾಜ್ಯದಲ್ಲಿ 70 ದಶಕಗಳಿಂದ ಬೇರೂರಿರುವ ಡಿಎಂಕೆ ಪಕ್ಷಕ್ಕೆ ನೇರಾನೇರ ಸವಾಲೆಸೆದಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳವು ಪ್ರಕರಣ ನಡೆದಿದೆ. ಇದಕ್ಕೆ ಚುನಾವಣಾ ಆಯೋಗವೂ ಸಹಕಾರ ನೀಡಿದೆ ಎಂದು ಇತ್ತೀಚೆಗೆ ಸರಣಿ ಆರೋಪ ಮಾಡಿದ್ದ ಕಾಂಗ್ರೆಸ್, ಮತ್ತೆ ಚುನಾವಣಾ ಆಯೋಗವನ್ನು ಟಾರ್ಗೆಟ್ ಮಾಡಿದೆ.