ಲೋಕಸಭೆ ಚುನಾವಣೆ ಸ್ಪರ್ಧೆಗೆ ಅವಕಾಶ ನೀಡಲಿ: ಡಾ.ವಿಜಯಲಕ್ಷ್ಮೀ ತುಂಗಳ
Feb 18 2024, 01:38 AM ISTಬಾಗಲಕೋಟೆ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಪಿ.ಸಿ.ಗದ್ದಿಗೌಡರಿಗೆ ಟಿಕೆಟ್ ಕೈತಪ್ಪಿದರೆ ನನಗೆ ಸ್ಪರ್ಧೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾ ಉಪಾಧ್ಯಕ್ಷೆ ಡಾ.ವಿಜಯಲಕ್ಷ್ಮೀ ತುಂಗಳ ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ. ನವನಗರದ ಪತ್ರಿಕಾ ಭವನದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿದ್ದು, ಜಿಲ್ಲೆಯಿಂದ ನನಗೆ ಸ್ಪರ್ಧೆ ಮಾಡಲು ಟಿಕೆಟ್ ಕೊಡಬೇಕು ಎಂದು ಮನವಿ ಮಾಡಿದರು.