ವಾಟರ್ ಸ್ಪೋರ್ಟ್ಸ್ ಚಟುವಟಿಕೆಗೆ ವಿರೋಧ: ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ
Apr 18 2024, 02:16 AM ISTಹಾರಂಗಿ ಗ್ರಾಮದಲ್ಲಿ ಚುನಾವಣೆ ಬಹಿಷ್ಕಾರ ಕೂಗೆದ್ದಿದೆ. ಹಾರಂಗಿ ಜಲಾಶಯದಲ್ಲಿ ಸಾಹಸಿ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳು ನಡೆಯುತ್ತಿದ್ದು ಇದರಿಂದ ಜಲಾಶಯದ ನೀರು ಸಂಪೂರ್ಣ ಕಲುಷಿತಗೊಳ್ಳುತ್ತಿದೆ ಎಂದು ಆರೋಪಿಸಿರುವ ಹಾರಂಗಿ ಗ್ರಾಮಸ್ಥರು ತಕ್ಷಣ ಜಲಾಶಯದಲ್ಲಿ ಕ್ರೀಡಾ ಚಟುವಟಿಕೆಗಳನ್ನು ರದ್ದುಗೊಳಿಸಬೇಕು, ಇಲ್ಲದಿದ್ದಲ್ಲಿ ಚುನಾವಣೆ ಬಹಿಷ್ಕಾರ ಮಾಡುವುದಾಗಿ ನಿರ್ಧಾರ ಎಚ್ಚರಿಸಿದ್ದಾರೆ.