ಇದು ನನ್ನ ಕೊನೆ ಚುನಾವಣೆ
Apr 07 2024, 01:49 AM ISTಚಡಚಣ: ಇದು ನನ್ನ ಕೊನೆಯ ಚುನಾವಣೆ, ಇದೊಂದು ಬಾರಿ ನನ್ನನ್ನು ಆಶೀರ್ವದಿಸಿ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿದರು. ಪಟ್ಟಣದ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಸಂಜೆ ನಡೆದ ಪ್ರಚಾರ ಸಭೆ ಹಾಗೂ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿ, ಚಡಚಣ ಹಾಗೂ ಇಂಡಿ ತಾಲೂಕಿನಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಸುಮಾರು 42 ವರ್ಷ ನನ್ನ ರಾಜಕೀಯ ಜೀವನ ಆರಂಭಗೊಂಡಿದ್ದು ಈ ಭಾಗದಿಂದಲೇ. ಮನೆ ಮಗನಂತೆ ನನ್ನನ್ನು ಬೆಳಿಸಿದ ತಮಗೆ ಚಿರ ಋಣಿಯಾಗಿದ್ದೇನೆ ಎಂದರು.