ಚುನಾವಣೆ ಕೊನೆ ಹೊತ್ತಲ್ಲಿ ನಕಲಿ ಸುದ್ದಿಗಳ ಹರಿಬಿಡ್ತಾರೆ: ಕೆ.ಎಸ್. ಈಶ್ವರಪ್ಪ
May 22 2024, 12:51 AM ISTಬಿಜೆಪಿ ಅಂದರೆ ಈಶ್ವರಪ್ಪ, ಈಶ್ವರಪ್ಪ ಅಂದರೆ ಪಕ್ಷ ಎನ್ನುತ್ತಿದ್ದ ಸಂದರ್ಭದಲ್ಲಿ ನಾನು ಪಕ್ಷೇತರನಾಗಿ ಸ್ಪರ್ಧಿಸುವ ಸಂದರ್ಭ ಎದುರಾಯಿತು. ಅದೇ ರೀತಿ ನಾನು ಸತ್ತರೆ ನನ್ನ ಎದೆಯ ಮೇಲೆ ಬಿಜೆಪಿ ಬಾವುಟ ಇರಬೇಕು ಎಂದು ಹೇಳುವ ರಘುಪತಿ ಭಟ್ ಅವರಿಗೂ ಮೋಸವಾಯಿತು. ಪಕ್ಷ ನಿಷ್ಠ ರಘುಪತಿರನ್ನು ಬಹುಮತದಿಂದ ಗೆಲ್ಲಿಸಬೇಕು. ಆ ರೀತಿ ನಮ್ಮ ಕಾರ್ಯಕರ್ತರು ಕೆಲಸ ಮಾಡಬೇಕು. ಪಕ್ಷ ಎಂದರೆ ತಾವುಗಳು ಮಾತ್ರ, ತಮ್ಮ ಕುಟುಂಬ ಮಾತ್ರ. ತಮ್ಮ ನಿರ್ಧಾರವೇ ಪಕ್ಷದ ನಿರ್ಧಾರ. ತಮ್ಮ ಹಿಂಬಾಲಕರಿಗೆ ಮಾತ್ರ ಎಲ್ಲ ಅವಕಾಶ ಕಲ್ಪಿಸಬೇಕು ಎಂದುಕೊಂಡವರಿಗೆ ಈ ಮೂಲಕ ಪಾಠ ಕಲಿಸಬೇಕು.