ಗೋದಾಮುಗಳ ಮೇಲೆ ನಿಗಾ ವಹಿಸಲು ಚುನಾವಣೆ ವೆಚ್ಚ ವೀಕ್ಷಕರ ಸೂಚನೆ
Mar 30 2024, 12:49 AM ISTಅನಧಿಕೃತವಾಗಿ ಮದ್ಯ ಸಾಗಾಣಿಕೆ ಹಾಗೂ ಸಂಗ್ರಹಣೆಯ ಬಗ್ಗೆ ವಿವಿಧ ತಂಡಗಳು ಹೆಚ್ಚು ನಿಗಾ ವಹಿಸಬೇಕು. ಸೂಕ್ಷ್ಮ ಸ್ಥಳಗಳಲ್ಲಿರುವ ಮದ್ಯದ ಅಂಗಡಿಗಳನ್ನು ಪಟ್ಟಿ ಮಾಡಿಕೊಂಡು ಅಬಕಾರಿ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು. ಬ್ಯಾಂಕ್ ವಹಿವಾಟಿನ ಮೇಲೆ ನಿಗಾ ಇಡುವುದು. ಬ್ಯಾಂಕ್ ಖಾತೆಗಳಲ್ಲಿ ನಡೆಯುವ ಸಂಶಯಾಸ್ಪದ ವಹಿವಾಟು, ಹತ್ತು ಲಕ್ಷ ಕ್ಕಿಂತ ಹೆಚ್ಚಿನ ಹಣ ವರ್ಗಾವಣೆ, ಒಂದು ಖಾತೆಯಿಂದ ೧೦ ಕ್ಕಿಂತ ಹೆಚ್ಚಿನ ಖಾತೆಗೆ ಹಣ ವರ್ಗಾವಣೆ ಕುರಿತಂತೆ ಪ್ರತಿದಿನ ಪರಿಶೀಲನೆ ನಡೆಸಬೇಕು.