ರಕ್ತ ಹರಿದರೂ ವಕ್ಫ್ಗೆ ರೈತರ ಜಮೀನು ಬಿಡಲ್ಲ: ಶಾಸಕ ಸಿದ್ದು ಸವದಿ
Oct 30 2024, 12:37 AM ISTಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ವಿಜಯಪುರ ಮತ್ತಿತರ ಪ್ರದೇಶಗಳಲ್ಲಿನ ವಕ್ಫ್ ಬೋರ್ಡ್ ನೋಟಿಸ್ ಬಿಸಿ ಬಿಸಿಯಾಗಿ ಚರ್ಚೆಯಲ್ಲಿರುವಾಗಲೇ ವಕ್ಫ್ ಆಸ್ತಿ ಪ್ರಕರಣವು ಬಾಗಲಕೋಟೆ ಜಿಲ್ಲೆ ತೇರದಾಳ ಕ್ಷೇತ್ರದಲ್ಲಿ ೨೦೧೯ರಿಂದಲೇ ಸದ್ದು ಮಾಡುತ್ತಿದ್ದು, ಈಗಲೂ ನೂರಾರು ರೈತರು ನ್ಯಾಯಾಲಯಕ್ಕೆ ಅಲೆದಾಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ.ಬನಹಟ್ಟಿಯ ವಿಶ್ರಾಂತಿ ಧಾಮದಲ್ಲಿ ತೇರದಾಳ ಶಾಸಕ ಸಿದ್ದು ಸವದಿ ನೇತೃತ್ವದಲ್ಲಿ ರೈತರು ತಮಗೆ ನ್ಯಾಯಾಲಯದಿಂದ ಈಗಲೂ ಬರುತ್ತಿರುವ ನೋಟಿಸ್ ಹಿಡಿದು ಪ್ರತಿಭಟಿಸಿದ ಪ್ರಸಂಗ ಮಂಗಳವಾರ ನಡೆಯಿತು.