ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಪ್ರಸಕ್ತ ವರ್ಷದಲ್ಲಿ ಮೂರನೇ ಬಾರಿಗೆ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿದ್ದು, ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.