ಹಾಸನ ಜೆಡಿಎಸ್ ಭದ್ರಕೋಟೆ ಎಂಬುದನ್ನು ಸಾಬೀತು ಮಾಡ್ತೇವೆ
Feb 19 2025, 12:45 AM ISTಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಸೇರಿ ಯಾವುದೇ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಾವು ಲಘುವಾಗಿ ಪರಿಗಣಿಸದೆ ಎಲ್ಲೆಡೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದರ ಜೊತೆಗೆ ಹಾಸನ ಜೆಡಿಎಸ್ನ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡುತ್ತೇವೆ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು. ದೇವೇಗೌಡರು, ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಮೊದಲು ತಾಲೂಕುವಾರು ಸಮ್ಮೇಳನ ನಡೆಸಲು ರೂಪುರೇಷ ಸಿದ್ಧ ಮಾಡಿಕೊಳ್ಳಲಾಗುತ್ತಿದೆ. ಕಡೆಯಲ್ಲಿ ಜಿಲ್ಲಾ ಮಟ್ಟದಲ್ಲೂ ಬೃಹತ್ ಸಮ್ಮೇಳನ ನಡೆಸಲು ಚಿಂತನೆ ಮಾಡಲಾಗಿದೆ ಎಂದು ತಿಳಿಸಿದರು.