ರಾಜ್ಯ ಸರ್ಕಾರ ನಡೆಸಿದ ಜಾತಿ ಗಣತಿಯ ವರದಿಯಲ್ಲಿ ಜೈನ ಸಮಾಜದ ಜನಸಂಖ್ಯೆ 2011ನೇ ಸಾಲಿಗಿಂತ ಕಡಿಮೆಯಾಗಿರುವುದು ತಿಳಿದು ಬಂದಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಸರ್ಕಾರದ ಈ ಜಾತಿ ಗಣತಿಯನ್ನು ಒಪ್ಪುವುದಕ್ಕೆ ಸಾಧ್ಯವಿಲ್ಲ ಎಂದು ಹೊಂಬುಜ ಜೈನ ಮಠದ ಡಾ.ದೇವೆಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದ್ದಾರೆ.