ಮಕ್ಕಳನ್ನು ದುಡಿಸಿಕೊಳ್ಳುವವರಿಗೆ 2 ವರ್ಷ ಜೈಲು
Nov 23 2023, 01:45 AM ISTಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 2016ರಂತೆ 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಗ್ಯಾರೇಜ್, ಹೋಟೆಲ್, ಕೃಷಿ ಮತ್ತು ಇನ್ನಿತರೆ ಅಪಾಯಕಾರಿ ಉದ್ಯಮಗಳಲ್ಲಿ ದುಡಿಸಿಕೊಳ್ಳುವ ಮಾಲೀಕರಿಗೆ 2 ವರ್ಷ ಜೈಲು ಶಿಕ್ಷೆಯೊಂದಿಗೆ 50 ಸಾವಿರ ರು.ಗಳ ದಂಡ ವಿಧಿಸಲಾಗುವುದೆಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು ತಿಳಿಸಿದರು.