ವಕ್ಫ್ ವಿಚಾರ ಮುಂದಿಟ್ಟುಕೊಂಡು ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ 8 ಸಾವಿರ ಲೀಡ್ ಕೊಟ್ಟು ಕಾಂಗ್ರೆಸ್ ಗೆಲುವಿಗೆ ಮುನ್ನೋಟ ಬರೆದಿದ್ದೀರಿ. ಅಧಿಕಾರ ನಶ್ವರ, ಮತದಾರನೇ ಈಶ್ವರ ಅಂತ ನಿಮ್ಮ ಮುಂದೆ ಬಂದಿದ್ದೀವಿ, ಯಾಸೀರ್ ಖಾನ್ ಪಠಾಣ್ ಗೆಲ್ಲಿಸಿಕೊಡಿ, ನಿಮ್ಮ ಋಣ ತೀರಿಸ್ತೀವಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಕನಕಪುರದ ಮೂರು ಕಡೆ ನಮ್ಮ ತಂದೆ ದೊಡ್ದಆಲಹಳ್ಳಿ ಕೆಂಪೇಗೌಡರ 25 ಎಕರೆ ಜಮೀನು ದಾನ ಮಾಡಿದ್ದೇವೆ. ದೇವೇಗೌಡರ ಕುಟುಂಬದವರು ಹಾಸನ, ರಾಮನಗರ, ಚನ್ನಪಟ್ಟಣದಲ್ಲಿ ಒಂದೇ ಒಂದು ಗುಂಟೆ ಜಾಗ ದಾನ ಮಾಡಿದ್ದಾರಾ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.