ಚುನಾವಣೆಗೆ ಮುಂಚಿತವಾಗಿ ಬಿಜೆಪಿಯ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಸೇರುವಂತೆ ಆಹ್ವಾನಿಸಿದ್ದು ನಿಜ. ಆದರೆ, ಈಗ ನಾನು ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ಮಾಜಿ ಸಚಿವ ಜನಾರ್ದನ ರೆಡ್ಡಿ ಬಾಯಿ ಚಪಲಕ್ಕೆ ಇಂತಹ ಆರೋಪ ಮಾಡುತ್ತಿದ್ದಾನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ನಾಯಕರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಖಡಕ್ ಎಚ್ಚರಿಕೆ ನೀಡಿ ಬಾಯಿ ಬಂದ್ ಮಾಡಿಸಿದ ಬೆನ್ನಲ್ಲೇ ಸೋಮವಾರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತ್ಯಾಗದ ಮಾತನಾಡಿದ್ದಾರೆ.
ಪಕ್ಷದಲ್ಲಿ ಪ್ರಮುಖ ಹುದ್ದೆಗಳು ಅಂಗಡಿಯಲ್ಲಿ ಸಿಗುವುದಿಲ್ಲ. ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಮಾಧ್ಯಮಗಳೇನು ಸ್ಥಾನಮಾನ ಕೊಡಿಸುವುದಿಲ್ಲ. ನಮ್ಮ ಕೆಲಸ ನೋಡಿ ಪಕ್ಷದ ನಾಯಕರು ಹುದ್ದೆ ನೀಡುತ್ತಾರೆ!