ಡಿ.ಕೆ. ಶಿವಕುಮಾರ್ ಕೈಗೊಂಬೆಯಾದ ರಾಜ್ಯ ಸರ್ಕಾರ
Nov 26 2023, 01:15 AM ISTಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರವನ್ನು ಕೈಗೊಂಬೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದ್ದಾರೆ. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಇಡೀ ಸರ್ಕಾರ ಡಿ.ಕೆ. ಶಿವಕುಮಾರ್ ಅವರ ಕಪಿಮುಷ್ಠಿಗೆ ಸಿಲುಕಿದಂತೆ ಕಾಣುತ್ತಿದೆ ಎಂದರು. ಇದೇ ವೇಳೆ ಜನಾರ್ದನ ರೆಡ್ಡಿ ಪಕ್ಷಕ್ಕೆ ಬಂದರೆ ಸ್ವಾಗತಿಸುವೆ. ಜನಾರ್ದನ ರೆಡ್ಡಿ ಸೇರಿದಂತೆ ಯಾರೇ ಬಂದರೂ ಪಕ್ಷದ ಬಲ ಹೆಚ್ಚುತ್ತದೆ ಎಂದು ಹೇಳಿದ್ದಾರೆ.