ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಿ : ಶಿಕ್ಷಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಲಹೆ
Jan 28 2025, 01:45 AM ISTಶಾಲಾ ಕಾಲೇಜುಗಳಲ್ಲಿ ಶಿಕ್ಷಕರು, ಅಧ್ಯಾಪಕರು ಕೇವಲ ಪುಸ್ತಕದ ಪಾಠ ಮಾಡಬೇಡಿ. ವಿದ್ಯಾರ್ಥಿಗಳಲ್ಲಿ ಉತ್ತಮ ನಡೆ, ನುಡಿ, ವಿಚಾರಧಾರೆ, ಚಿಂತನೆಗಳನ್ನು ಬೆಳೆಸಿ ದೇಶ ಕಟ್ಟುವ ರೀತಿಯಲ್ಲಿ ತಯಾರು ಮಾಡಬೇಕು. ಅವರನ್ನು ಸಮಾಜದ ಆಸ್ತಿಯನ್ನಾಗಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.